Nojoto: Largest Storytelling Platform

White ಬಹುಮಹಡಿ ಮನೆಯಲ್ಲಿ ಕಾಲಿಗೊಂದು ಕಾಲಾಳು, ಕೋಣೆಗೊಂದು

White ಬಹುಮಹಡಿ ಮನೆಯಲ್ಲಿ
ಕಾಲಿಗೊಂದು ಕಾಲಾಳು,
ಕೋಣೆಗೊಂದು ಸೀಸಿ ಕ್ಯಾಮರಾ
ಅವಳು ಬಿಕ್ಕುವುದು ಮಾತ್ರ
ಗೋಡೆಗಷ್ಟೇ ತಿಳಿಯುತ್ತದೆ.

೨.
ಸೂರ್ಯ ಸರಿದರೂ ಮನೆ ಮುಟ್ಟದ
ಮಗಳು;
ಜಾಗರಣದ ಜಗತ್ತಿನಲ್ಲಿ ಅವಳಿಗೆ
ಸೂರ್ಯನ ಮೇಲೆ ಮುನಿಸು.

೩.
ಶಬ್ದವೇಧಿ ವಿದ್ಯೆಯ ವಿವರಿಸುತ್ತಿದ್ದ ಅವನು;
ಉಸಿರು ನಿಲ್ಲಿಸಿ
ತೊಟ್ಟಿಲಿನ ಉಸಿರನ್ನು ಆಲಿಸಿ
ನಿಟ್ಟುಸಿರಿಟ್ಟಳು ಅವಳು …

©ಗುರು ಶಿರೂರ
  #amma